ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿದ ಬಿಆರ್ ಟಿಎಸ್ ‘ಚಿಗರಿ’ ಬಸ್ ಬಾರ್ ಗೆ ನುಗ್ಗಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯಿಂದ ಧಾರವಾಡಕ್ಕೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಚಿಗರಿ ಬಸ್, ಬೈರಿದೇವರಕೊಪ್ಪ ಬಳಿ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಬಾರ್ ಗೆ ನುಗ್ಗಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ ಕೆಲ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಚಾಲಕನ ಅವಾಂತರಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪದೇ ಪದೇ ಚಿಗರಿ ಬಸ್ ಗಳು ಅಪಘಾತಕ್ಕಿಡಾಗುತ್ತಿರುವ ಬಗ್ಗೆ ಕಿಡಿಕಾರಿದ್ದಾರೆ.