ಪ್ರಧಾನಿ ಮೋದಿ ಅವರು ಹೇಳಿದ ಸುಳ್ಳಿಗೆ ಪ್ರತಿಯಾಗಿ ನಾನು ಹಾಕಿದ ಸವಾಲನ್ನು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ.
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಬೃಹತ್ ಮತದಾರರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಉಪ ಚುನಾವಣೆಯಲ್ಲಿ ಬಿಜೆಪಿಯ ಲೋಕಲ್ ಲೀಡರ್ ಗಳಿಂದ ಪ್ರಧಾನಿ ಮೋದಿಯವರೆಗೂ ಸರಣಿ ಸುಳ್ಳುಗಳನ್ನು ಹೇಳಿದರು. ನೀವು ಆರೋಪ ಸಾಬೀತುಪಡಿಸಿ, ನಾನು ರಾಜಕೀಯ ನಿವೃತ್ತಿ ತಗೊತೀನಿ ಎಂದು ಮೋದಿಯವರಿಗೆ ಸವಾಲು ಹಾಕಿದ್ದೆ. ಅವರು ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದು ಹೇಳಿದ್ದಾರೆ.
ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ನಾಡಿನ ಜನತೆ ಎದುರಿಗೆ ಕೊಟ್ಟ ಎಲ್ಲಾ ಭರವಸೆಗಳನ್ನೂ ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ನಮ್ಮ ಜನರ ಆರ್ಥಿಕ ಶಕ್ತಿ ಮತ್ತು ಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡುವುದರ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದರು.
ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಸಂಡೂರು ಜನತೆಗೆ ಅಭಿನಂದಿಸಿ ಭಾಷಣ ಮಾಡುವ ವೇಳೆ ಸಂಡೂರು ಕ್ಷೇತ್ರಕ್ಕೆ ವಸತಿ ಇಲಾಖೆಯಿಂದ ಹೆಚ್ಚುವರಿಯಾಗಿ 2,000 ಮನೆಗಳನ್ನು ನೀಡುವುದಾಗಿ ಘೋಷಿಸಿದರು. ಈಗಾಗಲೇ 2,172 ಮನೆಗಳನ್ನು ನೀಡಲಾಗಿದೆ. ಸಂಡೂರಿನಲ್ಲಿ ಬಡವರು ಹೆಚ್ಚಾಗಿರುವುದರಿಂದ ಮತ್ತು ನಂಜುಂಡಪ್ಪ ಅವರ ವರದಿಯಲ್ಲಿ ಹಿಂದುಳಿದ ತಾಲ್ಲೂಕಿನ ಪಟ್ಟಿಯಲ್ಲಿ ಇರುವುದರಿಂದ ಹೆಚ್ಚುವರಿಯಾಗಿ 2000 ಮನೆಗಳನ್ನು ನೀಡಲಾಗುವುದು ಎಂದು ಘೋಷಿಸಿದರು.