ಕಾರವಾರ: ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ದಿದ್ದ ಶಾಲಾ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ ನಡೆದಿದೆ.
ಜೋಯಿಡಾ ತಾಲೂಕಿನ ಗಣೇಶ ಗುಡಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಪ್ರವಾಸದ ಬಸ್ ಪಲ್ಟಿಯಾಗಿ ಬಿದ್ದಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಬಸ್ ನಲ್ಲಿ 40 ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಇದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.