ಬೆಳಗಾವಿ: ಬೆಳಗಾವಿಯಲ್ಲಿ ಇಂದಿನಿಂದ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ಆರಂಭವಾಗಲಿದೆ. ಇದೇ ಸಂದರ್ಭದಲ್ಲಿ ಅಧಿವೇಶನ ವಿರೋಧಿಸಿ ಮಹಾಮೇಳಾವ್ ನಡೆಸಲು ಮುಂದಾಗಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬೆಳಗಾವಿ ಜಿಲ್ಲಾಡಳಿತ ಶಾಕ್ ನೀಡಿದೆ. ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಎಂಇಎಸ್ ಮುಖಂಡರು ಮಹಾಮೇಳಾವ್ ನಡೆಸಲು ಅನುಮತಿಗಾಗಿ ಜಿಲ್ಲಾಧಿಕಾರಿ ಮತ್ತು ಪೊಲೀಸರಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರು ಮಹಾಮೇಳಾವ್ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಡಿಸೆಂಬರ್ 9 ರಂದು ಬೆಳಿಗ್ಗೆ 6 ಗಂಟೆಯಿಂದ ಡಿಸೆಂಬರ್ 20ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದು, 5 ಜನಕ್ಕಿಂತ ಹೆಚ್ಚಿನ ಜನ ಸೇರುವಂತಿಲ್ಲ. ಸಭೆ ಸಮಾರಂಭ ಮಾಡುವಂತಿಲ್ಲ ಎಂದು ಹೇಳಲಾಗಿದೆ.