alex Certify ಮರಗಳ ಅಕ್ರಮ ಕಡಿತಲೆ ಪ್ರಕರಣ: ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮರಗಳ ಅಕ್ರಮ ಕಡಿತಲೆ ಪ್ರಕರಣ: ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಸ್ಪೆಂಡ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಖಂಡಿಕ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ, ಹಂಸಗಾರು, ಗಿಳಿಗಾರು ಗ್ರಾಮದಲ್ಲಿ ಆಕೆಶಿಯಾ ಮರಗಳ ಅಕ್ರಮ ಕಡಿತಲೆ, ಸಾಗಣೆ ವಿಷಯದಲ್ಲಿ ಕರ್ತವ್ಯ ಲೋಪ ಸಾಬೀತಾದ ಹಿನ್ನೆಲೆಯಲ್ಲಿ ಸಾಗರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ, ತಾಳಗುಪ್ಪದ ಉಪ ಅರಣ್ಯಾಧಿಕಾರಿ ಸಂತೋಷ್ ಕುಮಾರ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಅರಣ್ಯ ರಕ್ಷಣೆಗೆ ಮುಂಜಾಗ್ರತೆ ಕ್ರಮ ವಹಿಸುವಲ್ಲಿ ವಿಫಲ, ಬೇಜವಾಬ್ದಾರಿ ಮತ್ತು ಕರ್ತವ್ಯ ಲೋಪ ಸೇರಿದಂತೆ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವುದು ತನಿಕೆಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಬಾಕಿ ಇರಿಸಿ ಅವರನ್ನು ಅಮಾನತು ಮಾಡಲಾಗಿದೆ.

ಮರಗಳ ಅಕ್ರಮ ಕಡಿತಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳೊಂದಿಗೆ ವರದಿ ಸಲ್ಲಿಸಲು ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನಿರ್ದೇಶಿಸಿದ್ದರು. ಸಮಗ್ರ ತನಿಖೆ ನಡೆಸಿ ಕರ್ತವ್ಯಲೋಪ ಕಂಡು ಬಂದ ಹಿನ್ನಲೆಯಲ್ಲಿ ಸಂತೋಷ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. ಅಮಾನತು ಅವಧಿಯಲ್ಲಿ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡದಂತೆ ಸೂಚಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...