ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರಸಭೆ ಮಾಜಿ ಸದಸ್ಯರೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ನಗರಸಭೆಯ ಮಾಜಿ ಸದಸ್ಯ ಅನಿಲ್ ಕುಮಾರ್ ಹಲ್ಲೆಗೆ ಒಳಗಾದವರು. ಪಕ್ಕದ ಮನೆಯ ಅನಿಲ್ ಹಲ್ಲೆ ನಡೆಸಿದ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಅನಿಲ್ ಮದ್ಯಪಾನ ಮಾಡಿಕೊಂಡು ಬೀದಿ ದೀಪಗಳ ಒಡೆದು ಹಾಕಿ ತಂತಿಗಳನ್ನು ಕಿತ್ತು ಹಾಕಿದ್ದು, ಇದನ್ನು ಪ್ರಶ್ನಿಸಿ ಅನಿಲ್ ಕುಮಾರ್ ಬುದ್ದಿವಾದ ಹೇಳಿದ್ದಾರೆ. ಮರುದಿನ ಬೆಳಿಗ್ಗೆ ಅನಿಲ್ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಅನಿಲ್ ಕುಮಾರ್ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.