ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ರಶ್ಮಿಕಾ ಮಂದಣ್ಣ ಅಭಿನಯದ ‘ದಿ ಗರ್ಲ್ ಫ್ರೆಂಡ್’ ಇನ್ನೇನು ಬಿಡುಗಡೆಗೆ ಸಿದ್ಧವಾಗಿದ್ದು, ಇದರ ಟೀಸರ್ ಇಂದು ಗೀತಾ ಆರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಈ ಟೀಸರ್ ಕೆಲವೇ ಕ್ಷಣಗಳಲ್ಲಿ ಭರ್ಜರಿ ವೀಕ್ಷಣೆ ಪಡೆದುಕೊಳ್ಳುವ ಮೂಲಕ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ.
ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಸೇರಿದಂತೆ ದೀಕ್ಷಿತ್ ಶೆಟ್ಟಿ, ರಾವ್ ರಮೇಶ್ ಮತ್ತು ರೋಹಿಣಿ ಪ್ರಮುಖ ಪಾತ್ರದಲ್ಲಿದ್ದು, ಗೀತಾ ಆರ್ಟ್ಸ್ ಬ್ಯಾನರ್ ನಲ್ಲಿ ವಿದ್ಯಾ ಕೊಪ್ಪಿನೀಡಿ ಮತ್ತು ಧೀರಜ್ ಮೊಗಿಲೆನಿ ನಿರ್ಮಾಣ ಮಾಡಿದ್ದಾರೆ.
ಚೋಟಾ ಕೆ ಪ್ರಸಾದ್ ಸಂಕಲನ, ಕೃಷ್ಣನ್ ವಸಂತ್ ಅವರ ಛಾಯಾಗ್ರಾಹಣವಿದೆ. ಎ ಹೆಶಮ್ ಅಬ್ದುಲ್ ವಹಾಬ್ ಸಂಗೀತ ಸಂಯೋಜನೆ ನೀಡಿದ್ದಾರೆ.