ತುಮಕೂರು : ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ತುಮಕೂರಿನ ಕ್ಯಾತಸಂದ್ರದಲ್ಲಿ ಇರುವ ಸಿದ್ದಗಂಗಾ ಮಠದ ಹಳೆಮಠದ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿದೆ.
ಶನಿವಾರ ಮಧ್ಯರಾತ್ರಿ 11:30 ರ ವೇಳೆಗೆ ಚಿರತೆ ಓಡಾಡಿದ್ದು, ಸಿಸಿಟಿವಿಯಲ್ಲಿ ಚಿರತೆ ಓಡಾಟದ ದೃಶ್ಯಗಳು ಸೆರೆಯಾಗಿದೆ. ನಂತರ ಸ್ಥಳಕ್ಕೆ ಅರಣ್ಯಾಧಿಕಾರಿ ಧಾವಿಸಿ ಚಿರತೆ ಸೆರೆಗೆ ಬೋನು ಇಟ್ಟಿದ್ದಾರೆ.