ಮಂಡ್ಯ : ಮಂಡ್ಯದಲ್ಲಿ ಡಿಸೆಂಬರ್ 20 ರಿಂದ 22 ರವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ನಿಷೇಧ ವಿವಾದ ಉಂಟಾಗಿದ್ದು, ಸಮ್ಮೇಳನದಲ್ಲಿ ಬಾಡೂಟಕ್ಕೆ ಆಗ್ರಹಿಸಿ ಧರಣಿ ನಡೆಸಲಾಗುತ್ತಿದೆ.
ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸಮಾನ ಮನಸ್ಕ ವೇದಿಕೆ ಕಾರ್ಯಕರ್ತರು ಸಾಹಿತ್ಯ ಸಮ್ಮೇಳನದಲ್ಲಿ ಬಾಟೂಟ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ಕೋಸಂಬರಿ ಜೊತೆ ಎಗ್ ಬುರ್ಜಿ ಇರಲಿ, ಹಪ್ಪದ ಜೊತೆ ಕೊರಬಾಡು, ಕಬಾಬ್ ಇರಲಿ. ಜೊತೆಗೆ ಬೋಟಿ ಗೊಜ್ಜು ಇರಲಿ ಎಂದು ಘೋಷಣೆ ಕೂಗಿ ಧರಣಿ ನಡೆಸಿದ್ದಾರೆ. ನೀವು ಬಾಡೂಟ ಕೊಡದಿದ್ದರೆ ನಾವೇ ಬಾಡೂಟ ಹಾಕಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸಮ್ಮೇಳನದಲ್ಲಿ ಮಾಂಸಾಸಹಾರ ನಿಷೇಧ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಭುವನೇಶ್ವರಿ ಪೂಜಿಸುವ ಜಾಗದಲ್ಲಿ ಮಾಂಸಹಾರಕ್ಕೆ ಅವಕಾಶವಿಲ್ಲವೆಂದು ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳು ಹೇಳಿದ್ದಾರೆ.