ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರೈತರು ಬೆಳಗಾವಿಯ ಹಲಗಾ ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಪ್ರತಿಭಟನೆ ನಡೆಸುತ್ತಿದ್ದು, ರಸ್ತೆ ತಡೆ ನಡೆಸಿದ್ದಾರೆ. ಈ ವೇಳೆ ಎರಡು ಸರ್ಕಾರಿ ಬಸ್ ಗಳು ಪ್ರತಿಭಟನಾ ಸ್ಥಳಕ್ಕೆ ನುಗ್ಗಿ, ದಾಟಿ ಹೋಗುತ್ತಿದ್ದಂತೆ ರೊಚ್ಚಿಗೆದ್ದ ರೈತರು ಬಸ್ ಅಡ್ಡಗಟ್ಟಿ ಚಾಲಕನ ಕೈ ಕಟ್ಟಿಹಾಕಿರುವ ಘಟನೆ ನಡೆದಿದೆ.
ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಎರಡು ಸರ್ಕಾರಿ ಬಸ್ ಗಳು ಆಗಮಿಸಿದ್ದು, ಪ್ರತಿಭಟನಾಕಾರರು ದಾಟಿ ಮುಂದೆ ಹೋಗಿವೆ. ಇದರಿಂದ ಸಿಟ್ಟಿಗೆದ್ದ ರೈತರು, ಬಸ್ ಅಡ್ಡಗಟ್ಟಿ ನಿಲ್ಲಿಸಿದ್ದಾರೆ. ಬಸ್ ಹತ್ತಿ ಬಸ್ ಚಾಲಕನ ಕೈಗಳನ್ನು ಸ್ಟೇರಿಂಗ್ ಗೆ ಕಟ್ಟಿಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ವಿಧಾನಮಂಡಲದ ಚಳಿಗಾಲದ ಅಧಿವೇಶ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನವೇ ಸರ್ಕಾರಕ್ಕೆ ವಿವಿಧ ಸಂಘಟನೆಗಳ ಪ್ರತಿಭಟನೆಯ ಬಿಸಿ ತಟ್ಟಿದೆ.