ಮಂಗಳೂರು: ತಾಂತ್ರಿಕ ದೋಷದಿಂದ ಅನಿಲ ಟ್ಯಾಂಕರ್ ನಿಂದ ಏಕಾಏಕಿ ಗ್ಯಾಸ್ ಸೋರಿಕೆಯುಂಟಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಆತಂಕದ ವಾತವರಣ ನಿರ್ಮಾಣವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಚ್ಚಿಲ ಬಳಿ ನಡೆದಿದೆ.
ಕಾರವಾರದಿಂದ ಕೊಚ್ಚಿಗೆ ಅನಿಲ ಟ್ಯಾಂಕರ್ ತೆರಳುತ್ತಿತ್ತು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉಚ್ಚಿಲ ಬಳಿ ಏಕಾಏಕಿ ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗಿದೆ. ಇದನ್ನು ಗಮನಿಸಿದ ಚಾಲಕ ತಕ್ಷಣ ಹೆದ್ದಾರಿ ಬಳಿ ಟ್ಯಾಂಕರ್ ನಿಲ್ಲಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಅನಿಲ ಸೋರಿಕೆಯಿಂದಾಗಿ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.