ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ದರ್ಶನ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಮಾಡಿದೆ.
ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ದರ್ಶನ್ ಪರ ವಕೀಲರ ಹಾಗೂ ಸರ್ಕಾರದ ಪರ ವಕೀಲರ ಸುದೀರ್ಘ ವಾದ-ಪ್ರತಿವಾದವನ್ನು ಆಲಿಸಿತು. ಈ ವೇಳೆ ದರ್ಶನ್ ಪರ ವಕೀಲರು ದರ್ಶನ್ ಗೆ ಸರ್ಜರಿಗೆ ಡೇಟ್ ಫಿಕ್ಸ್ ಮಾಡಲಾಗಿದೆ. ಡಿಸೆಂಬರ್ 11ರಂದು ದರ್ಶನ್ ಗೆ ಶಸ್ತ್ರಚಿಕಿತ್ಸೆಗೆ ವೈದ್ಯರು ದಿನಾಂಕ ನಿಗದಿ ಮಾಡಿದ್ದಾರೆ. ಆದರೆ ಅಂದೇ ದರ್ಶನ್ ಮಧ್ಯಂತರ ಜಾಮೀನು ಮುಗಿಯಲಿದ್ದು, ಮಧ್ಯಂತರ ಜಾಮಿನು ಅವಧಿ ವಿಸ್ತರಿಸುವಂತೆ ಮನವಿ ಮಾಡಿದರು.
ಈ ವೇಳೆ ಹೈಕೋರ್ಟ್ ದರ್ಶನ್ ರೆಗ್ಯೂಲರ್ ಬೇಲ್ ಅರ್ಜಿಯ ತೀರ್ಪು ಕಾಯ್ದಿರಿಸಿದ್ದು, ದರ್ಶನ್ ಮಧ್ಯಂತರ ಜಾಮೀನು ಅವಧಿಯನ್ನೂ ವಿಸ್ತರಿಸಿದೆ. ಜಾಮೀನು ಅರ್ಜಿ ವಿಚಾರಣೆ ಕುರಿತು ಮುಂದಿನ ಆದೇಶದವರೆಗೆ ಮಧ್ಯಂತರ ಜಾಮೀನು ವಿಸ್ತರಿಸಲಾಗುವುದು ಎಂದು ಕೋರ್ಟ್ ತಿಳಿಸಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ಬೆನ್ನುನೋವು ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ನೀಡಿತ್ತು. ವೈದ್ಯರು ಸರ್ಜರಿಗೆ ಸೂಚಿಸಿದ್ದರೂ ದರ್ಶನ್ ಸರ್ಜರಿಗೆ ಒಳಗಾಗದೇ ವಿಳಂಬ ಮಾಡುತ್ತಿದ್ದರು ಎನ್ನಲಾಗಿತ್ತು. ಇದೀಗ ದರ್ಶನ್ ಮಧ್ಯಂತರ ಜಾಮೀನು ಅವಧಿ ಮುಗಿಯಲು ಇನ್ನು ಕೆಲ ದಿನಗಳು ಮಾತ್ರ ಬಾಕಿದೆ. ಡಿ.11ರಂದು ದರ್ಶನ್ ಜಾಮೀನು ಅವಧಿ ಅಂತ್ಯವಾಗುತ್ತಿದೆ. ಈ ನಡುವೆ ಜಾಮೀನು ಅರ್ಜಿ ವಿಚಾರಣೆ ವೇಳೆ ದರ್ಶನ್ ಸರ್ಜರಿಗೆ ವಿಳಂಬ ಮಾಡುತ್ತಿರುವ ಬಗ್ಗೆ ಹೈಕೋರ್ಟ್ ಕೂಡ ಪ್ರಶ್ನೆ ಮಾಡಿತ್ತು. ದರ್ಶನ್ ಪರ ವಕೀಲರು ಬಿಪಿ ವ್ಯತ್ಯಾಸದ ಕಾರಣ ನೀಡಿದ್ದರು.
ಇಂದಿನ ವಿಚಾರಣೆ ವೇಳೆ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್, ದರ್ಶನ್ ಮೆಡಿಕಲ್ ವರದಿ ಬಗ್ಗೆ ವಾದ ಮಂಡಿಸಿದ್ದು, ದರ್ಶನ್ ಗೆ ಸರ್ಜರಿ ಮಾಡಲು ವೈದ್ಯರು ದಿನಾಂಕ ನಿಗದಿ ಮಾಡಿದ್ದಾರೆ. ಡಿ.11ರಂದು ದರ್ಶನ್ ಗೆ ಸರ್ಜರಿಗೆ ಡೇಟ್ ಫಿಕ್ಸ್ ಆಗಿದೆ. ಅಂದೇ ಅವರ ಮಧ್ಯಂತರ ಜಾಮೀನು ಕೂಡ ಮುಕ್ತಾಯವಾಗುತ್ತದೆ. ಹೀಗಾಗಿ ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಕೋರ್ಟ್ ಗೆ ಮನವಿ ಮಾಡಿದ್ದರು. ಇದೀಗ ಹೈಕೋರ್ಟ್ ದರ್ಶನ್ ಮಧ್ಯಂತರ ಜಾಮೀನು ಅವಧಿ ವಿಸ್ತರಿಸಿದೆ.