ಪುಣೆ: ಬೆಳಗಾವಿಯಲ್ಲಿ ಎಂಇಎಸ್ ಮಹಾಮೇಳಾವ್ ಗೆ ಅವಕಾಶ ನಿರಾಕರಿಸಿದ್ದಕ್ಕೆ ಮಹಾರಾಷ್ಟ್ರದ ಮಾಜಿ ಸಚಿವ, ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕೆಂದು ಆಗ್ರಹಿಸಿದ್ದಾರೆ.
ಬೆಳಗಾವಿಯಲ್ಲಿ ವಾಸಿಸುವ ಮರಾಠಿ ಮಾತನಾಡುವ ಜನರ ಹಕ್ಕುಗಳು, ಸ್ವಾತಂತ್ರ್ಯ ಹತ್ತಿಕ್ಕಲಾಗುತ್ತಿದೆ. ಬೆಳಗಾವಿಯಲ್ಲಿ ಎಂಇಎಸ್ ನವರಿಗೆ ಸಾರ್ವಜನಿಕ ಸಭೆ ನಡೆಸಲು, ಮಹಾರಾಷ್ಟ್ರ ನಾಯಕರು ಭಾಗವಹಿಸಲು ಅನುಮತಿ ನೀಡಿಲ್ಲ ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಮರಾಠಿ ಭಾಷೆಯವರನ್ನು ತುಳಿಯಲಾಗುತ್ತಿದೆ. ಬೆಳಗಾವಿಯಲ್ಲಿ ಮರಾಠಿ ಭಾಷಿಕರ ಸ್ಥಿತಿ ಚಿಂತಾಜನಕವಾಗಿದೆ. ಮಹಾರಾಷ್ಟ್ರ ನಾಯಕರಿಗೆ ಕರ್ನಾಟಕ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಹೆಚ್ಚುವರಿ ಅನುದಾನ ನೀಡುವ ಬಗ್ಗೆ ಹಿಂದಿನ ಆಸಂವಿಧಾನಿಕ ಸಿಎಂ ಭರವಸೆ ನೀಡಿದ್ದರು. ಅಂದಿನ ಸಿಎಂ ನೀಡಿದ ಭರವಸೆ ಏನಾಯಿತು ಎಂದು ಪ್ರಶ್ನಿಸಿದ್ದಾರೆ.