ಬೆಳಗಾವಿ: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ಮೊತ್ತವನ್ನು ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಹೆಚ್ಚಳ ಮಾಡಲಾಗುವುದು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಅತಿಥಿ ಶಿಕ್ಷಕರು / ಉಪನ್ಯಾಸಕರ ಬದಲಾಗಿ ಅರೆಕಾಲಿಕ ಶಿಕ್ಷಕರ ನೇಮಕ ಮಾಡುವ ಪ್ರಸ್ತಾವನೆ ಇರುವುದಿಲ್ಲ ಎಂದು ಹೇಳಿದ್ದಾರೆ.