HomeKarnatakaBREAKING: ಬಡ್ತಿ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್: ಅಂತಿಮ ಜೇಷ್ಠತಾ ಪಟ್ಟಿ ಪ್ರಕಟಿಸಿ ಫೆಬ್ರವರಿಯೊಳಗೆ...

BREAKING: ಬಡ್ತಿ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್: ಅಂತಿಮ ಜೇಷ್ಠತಾ ಪಟ್ಟಿ ಪ್ರಕಟಿಸಿ ಫೆಬ್ರವರಿಯೊಳಗೆ ಪ್ರಕ್ರಿಯೆ ಪೂರ್ಣ

ಬೆಳಗಾವಿ: ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ಬರುವ 2025ರ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಾಹಿತಿ ನೀಡಿದ ಅವರು, ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿ, ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಜೇಷ್ಠತಾ ಪಟ್ಟಿ ಪ್ರಕಟಿಸಿದ ನಂತರ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ಬರುವ 2025ರ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular