ಬೆಂಗಳೂರು: ಇದೇ ಡಿ. 20ರಿಂದ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಮಾಜಿ ಸಿಎಂ ಎಸ್.ಎಂ. ಕೃಷ್ಣ ಪತ್ರ ಬರೆದು ಶುಭ ಹಾರೈಸಿದ್ದಾರೆ.
ಅನಾರೋಗ್ಯದಿಂದ ನಿಧನರಾದ ಎಸ್.ಎಂ. ಕೃಷ್ಣ ಕೊನೆಯವರೆಗೂ ಚಟುವಟಿಕೆಯಿಂದ ಇದ್ದರು. ಮಂಡ್ಯದಲ್ಲಿ ನಡೆಯುತ್ತಿರುವ ಸಮ್ಮೇಳನ ಯಶಸ್ವಿಯಾಗಲಿ ಎಂದು ಮಂಡ್ಯ ಜಿಲ್ಲಾಡಳಿತಕ್ಕೆ ವಾರದ ಹಿಂದೆ ಪತ್ರ ಬರೆದು ಶುಭ ಸಂದೇಶ ಕಳುಹಿಸಿದ್ದರು.
ನಮ್ಮ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಭಾಶಯಗಳು. ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ದೂರದೃಷ್ಟಿಯ ಫಲವಾಗಿ ರೂಪುಗೊಂಡ ಮಂಡ್ಯ ಜಿಲ್ಲೆ ನಾಡಿನಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಭಾಷಿಕರು ಇರುವ ಜಿಲ್ಲೆಯಾಗಿದೆ. ಇಂತಹ ಐತಿಹ್ಯದ ನಮ್ಮ ಮಂಡ್ಯ ಜಿಲ್ಲೆಯಲ್ಲಿ ಮೂರನೇ ಬಾರಿಗೆ ಆಯೋಜನೆಗೊಂಡಿರುವ ಕನ್ನಡ ಸಿರಿ ಹಬ್ಬವು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ್ದಾರೆ.