ಬೆಂಗಳೂರು : ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಯಡಿಯೂರಪ್ಪ ಧೀಮಂತ ಮುತ್ಸದ್ಧಿ ರಾಜಕಾರಣಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಮಾಜಿ ಕೇಂದ್ರ ವಿದೇಶಾಂಗ ಸಚಿವರು, ಪಕ್ಷದ ಹಿರಿಯ ನಾಯಕ, ಪದ್ಮವಿಭೂಷಣ ಶ್ರೀ ಎಸ್.ಎಂ.ಕೃಷ್ಣ ಅವರು ನಮ್ಮನ್ನು ಬಿಟ್ಟು ಅಗಲಿದ ಸುದ್ದಿ ತಿಳಿದು ಅತೀವ ಆಘಾವಾಗಿದೆ. ರಾಷ್ಟ್ರ, ರಾಜ್ಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದ ಶ್ರೀ ಎಸ್.ಎಂ.ಕೃಷ್ಣ ಅವರ ನಿಧನದಿಂದ ನಾಡು ಒಬ್ಬ ಶ್ರೇಷ್ಠ ನಾಯಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯಿಂದ ವೈಯಕ್ತಿಕವಾಗಿ ಒಬ್ಬ ಹಿರಿಯಣ್ಣನನ್ನು ಕಳೆದುಕೊಂಡ ನೋವು ನನಗಾಗಿದೆ. ಶ್ರೀ ಎಸ್.ಎಂ.ಕೃಷ್ಣ ಅವರಿಗೆ ಅಶ್ರುಪೂರ್ಣ ಶ್ರದ್ಧಾಂಜಲಿ ಸಲ್ಲಿಸುತ್ತಾ, ಅಗಲಿದ ಆ ಹಿರಿಯ ಚೇತನಕ್ಕೆ ದೇವರು ಉತ್ತಮ ಸದ್ಗತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು, ಅಪಾರ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.
ಧೀಮಂತ ಮುತ್ಸದ್ಧಿ ರಾಜಕಾರಣಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಮಾಜಿ ಕೇಂದ್ರ ವಿದೇಶಾಂಗ ಸಚಿವರು, ಪಕ್ಷದ ಹಿರಿಯ ನಾಯಕ, ಪದ್ಮವಿಭೂಷಣ ಶ್ರೀ ಎಸ್.ಎಂ.ಕೃಷ್ಣ ಅವರು ನಮ್ಮನ್ನು ಬಿಟ್ಟು ಅಗಲಿದ ಸುದ್ದಿ ತಿಳಿದು ಅತೀವ ಆಘಾವಾಗಿದೆ. ರಾಷ್ಟ್ರ, ರಾಜ್ಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದ ಶ್ರೀ ಎಸ್.ಎಂ.ಕೃಷ್ಣ ಅವರ ನಿಧನದಿಂದ ನಾಡು ಒಬ್ಬ… pic.twitter.com/b5gKjgWuiF
— B.S.Yediyurappa (@BSYBJP) December 10, 2024