HomeKarnatakaBREAKING : ಮಾಜಿ ಸಿಎಂ S.M ಕೃಷ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, DCM ಡಿಕೆ ಶಿವಕುಮಾರ್...

BREAKING : ಮಾಜಿ ಸಿಎಂ S.M ಕೃಷ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, DCM ಡಿಕೆ ಶಿವಕುಮಾರ್ ಸಂತಾಪ.!

ಬೆಂಗಳೂರು : ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ. ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು. ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದಿದ್ದಾರೆ.

 

ಆತ್ಮೀಯರು, ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಶ್ರೀ ಎಸ್.ಎಂ. ಕೃಷ್ಣ ಅವರ ನಿಧನದಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಕರ್ನಾಟಕದ ಪ್ರಗತಿಗೆ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ. ನನ್ನ ರಾಜಕೀಯ ಬೆಳವಣಿಗೆಗೂ ಸೂಕ್ತ ಮಾರ್ಗದರ್ಶನ ನೀಡಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಡಿಸಿಎಂ ಡಿಕೆಶಿ ಟ್ವೀಟ್ ಮಾಡಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular