HomeKarnatakaರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 'ವಿದ್ಯಾರ್ಥಿ ವೇತನ'ಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.!

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.!

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ “ಶುಲ್ಕ ಮರುಪಾವತಿ” ಹಾಗೂ ‘’ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ’’ಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 20ರ ವರೆಗೆ ಅವಧಿ ವಿಸ್ತರಿಸಲಾಗಿದೆ.

ರಾಜ್ಯ ವಿದ್ಯಾರ್ಥಿವೇತನ ವೆಬ್ ಸೈಟ್ https://ssp.postmatric.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ: 8050770005 ಅಥವಾ ಇ-ಮೇಲ್ ವಿಳಾಸ: [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular