ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ಖ್ಯಾತ ನಟಿ ರಮ್ಯಾ, ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಬೆಂಗಳೂರಿನ ಸದಾಶಿವ ನಗರಕ್ಕೆ ಆಗಮಿಸಿದ ರಮ್ಯಾ, ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಟಿ ರಮ್ಯಾ, ಈಗ ನಾನು ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಭಾವುಕರಾದರು.
ನಟಿ ರಮ್ಯಾ ಅವರನ್ನು ರಾಜಕೀಯಕ್ಕೆ ಕರೆತಂದಿದ್ದೇ ಎಸ್.ಎಂ.ಕೃಷ್ಣ. ಈ ಹಿನ್ನೆಲೆಯಲ್ಲಿ ಹಲವು ಬಾರಿ ರಮ್ಯಾ, ಎಸ್.ಎಂ.ಕೃಷ್ಣ ನಿವಾಸಕ್ಕೆ ತೆರಳಿ ಅವರ ಸಲಹೆಗಳನ್ನು ಪಡೆಯುತ್ತಿದ್ದರು. ಎಸ್.ಎಂ.ಕೃಷ್ಣ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದ ರಮ್ಯಾ, ರಾಜಕಾರಣದಲ್ಲಿ ಶೀಘ್ರವಾಗಿ ಬೆಳೆದು ಸಂಸದರಾಗಿದ್ದರು.