HomeKarnatakaGOOD NEWS : ರಾಜ್ಯ ಸರ್ಕಾರದಿಂದ 'ST' ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಿಷ್ಯವೇತನಕ್ಕೆ...

GOOD NEWS : ರಾಜ್ಯ ಸರ್ಕಾರದಿಂದ ‘ST’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ.!

ಬೆಂಗಳೂರು :   ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಸರ್ಕಾರಿ, ಖಾಸಗಿ, ಅನುದಾನಿತ ಶಾಲಾ, ಕಾಲೇಜುಗಳಲ್ಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಎಸ್‌ಎಸ್‌ಪಿ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟಿನ https://ssp.postmatric.karnataka.gov.in ಲಿಂಕ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸರ್ಕಾರಿ, ಖಾಸಗಿ, ಅನುದಾನಿತ ಶಾಲಾ, ಕಾಲೇಜುಗಳಲ್ಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.ಏನಾದರೂ ತಾಂತ್ರಿಕ ತೊಂದರೆಗಳಾದಲ್ಲಿ ಎಸ್‌ಎಸ್‌ಪಿ ಸಹಾಯವಾಣಿ ಸಂಖ್ಯೆ 080-22261789 ಗೆ ಕರೆಮಾಡಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ನಗರದ ವಾಲ್ಮೀಕಿ ಭವನದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಗಳ ಕಾರ್ಯಾಲಯಕ್ಕೆ ಸಂಪರ್ಕಿಸಬಹುದು ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular