alex Certify BREAKING : ಸಕಲ ಸರ್ಕಾರಿ ಗೌರವಗಳೊಂದಿಗೆ S.M ಕೃಷ್ಣ ಅಂತ್ಯಕ್ರಿಯೆ, ಇಂದಿನಿಂದ 3 ದಿನ ರಾಜ್ಯಾದ್ಯಂತ ಶೋಕಾಚರಣೆ ಘೋಷಣೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸಕಲ ಸರ್ಕಾರಿ ಗೌರವಗಳೊಂದಿಗೆ S.M ಕೃಷ್ಣ ಅಂತ್ಯಕ್ರಿಯೆ, ಇಂದಿನಿಂದ 3 ದಿನ ರಾಜ್ಯಾದ್ಯಂತ ಶೋಕಾಚರಣೆ ಘೋಷಣೆ.!

ಬೆಂಗಳೂರು : ಮಾಜಿ ಸಿಎಂ S.M ಕೃಷ್ಣ ನಿಧನರಾದ ಹಿನ್ನೆಲೆ ಇಂದಿನಿಂದ ಮೂರು ದಿನ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗಿದೆ. ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್ ಎಂ ಕೃಷ್ಣ ಅಂತ್ಯಕ್ರಿಯೆ ನಡೆಸಲು ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಶ್ರೀ ಎಸ್ ಎಂ ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರದಂದು ಪೂರ್ವಾಹ್ನ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ.

ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ  ಅಂತ್ಯಕ್ರಿಯೆ  ನೆರವೇರಿಸಲಾಗುವುದು ಮತ್ತು ದಿನಾಂಕ:10.12.2024 ರಿಂದ 12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳು ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...