ಬೆಂಗಳೂರು: ಜನವರಿ 1ರಿಂದ ಎಲ್ಲಾ ತಾಲೂಕು ಕಚೇರಿಗಳಲ್ಲಿ ಗ್ರ್ಯಾಂಟ್ ಲ್ಯಾಂಡ್ ದಾಖಲೆಗಳ ಸ್ಕ್ಯಾನ್ ನಡೆಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಬಗರ್ ಹುಕುಂ ಸೇರಿದಂತೆ ನಾನಾ ಸರ್ಕಾರಿ ಭೂಮಿ ಮಂಜೂರು ಪ್ರಕರಣಗಳಲ್ಲಿ ಕಂದಾಯ ಅಧಿಕಾರಿಗಳ ಭ್ರಷ್ಟಾಚಾರ, ಅಕ್ರಮಕ್ಕೆ ಕಡಿವಾಣ ಹಾಕಲು ಜನವರಿ 1ರಿಂದ ರಾಜ್ಯದ ಎಲ್ಲ ತಾಲೂಕು ಕಚೇರಿಗಳಲ್ಲಿ ಗ್ರ್ಯಾಂಟ್ ಲ್ಯಾಂಡ್ ದಾಖಲೆಗಳ ಸ್ಕ್ಯಾನ್ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.