ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಬೆಸ್ಕಾಂ, ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ರಾಯಚೂರು, ಗದಗ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಈಸ್ಟ್ ಸರ್ಕಲ್ ಬೆಸ್ಕಾಂ ಸೂಪರಿಂಟೆಂಡೆಂಟ್ ಎಂಜಿನಿಯರ್ ಲೋಕೇಶ್ ಬಾಬು, ಬಿಬಿಎಂಪಿ ವಸಂತಪುರ ವಾರ್ಡ್ ಕ್ಂದಾಯ ನಿರೀಕ್ಷಕ ಸುರೇಶ್ ಬಾಬು, ಬಿಬಿಎಂಪಿ ಯಲಹಂಕ ವಲಯದ ತೆರಿಗೆ ನಿರೀಕ್ಷಕ ಕೃಷ್ಣಪ್ಪ ಹಾಗೂ ಬೆಂಗಳೂರು ಗ್ರಾಮಾಂತರ ಆರೋಗ್ಯಾಧಿಕರಿ ಎಂ.ಸಿ.ಸುನೀಲ್ ಕುಮಾರ್ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ಕಲಬುರಗಿ ಪಾಲಿಕೆ ಉಪ ಆಯುಕ್ತರ ಮನೆ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.