HomeKarnatakaGOOD NEWS : 'ಬಗರ್ ಹುಕುಂ' ಸಮಿತಿಗಳಲ್ಲಿ ತಿರಸ್ಕೃತಗೊಂಡ ನಮೂನೆ 57ರ ಅರ್ಜಿಗಳ ಪುನರ್ ಪರಿಶೀಲನೆಗೆ...

GOOD NEWS : ‘ಬಗರ್ ಹುಕುಂ’ ಸಮಿತಿಗಳಲ್ಲಿ ತಿರಸ್ಕೃತಗೊಂಡ ನಮೂನೆ 57ರ ಅರ್ಜಿಗಳ ಪುನರ್ ಪರಿಶೀಲನೆಗೆ ಕ್ರಮ : ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಲು ನಮೂನೆ 50, 53, 57 ರಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗುತ್ತಿದೆ. ನಮೂನೆ 57ರ ಅಡಿ ಸಲ್ಲಿಕೆಯಾದ ಒಟ್ಟು 2.23 ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ರಾಜ್ಯಾದ್ಯಂತ ತಿರಸ್ಕೃತಗೊಳಿಸಲಾಗಿದೆ. ಒಂದು ವೇಳೆ ರೈತರು ಇದರಿಂದ ಬಾಧಿತರಾಗಿದ್ದರೆ, ಉಪವಿಭಾಗಾಧಿಕಾರಿಗೆ ಮೇಲ್ಮನವಿ ಸಲ್ಲಿಸಬಹುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹೇಳಿದರು.

ಪ್ರಕರಣಗಳನ್ನು ಮರು ಪರಿಶೀಲಿಸುವಂತೆ ಉಪವಿಭಾಗಾಧಿಕಾರಿಗಳು ಸೂಚಿಸಿದರೆ, ಬಗರ್ ಹುಕುಂ ಸಮಿತಿಗಳಲ್ಲಿ ತಿರಸ್ಕೃತಗೊಂಡ ನಮೂನೆ 57ರ ಅರ್ಜಿಗಳನ್ನು ಪುನರ್ ಪರಿಶೀಲನೆಗೆ ಪರಿಗಣಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular