ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಪ್ರಸಕ್ತ ವರ್ಷದುದ್ದಕ್ಕೂ ಆಯೋಜಿಸಿರುವ ಗಾಂಧಿ ಭಾರತ ಕಾರ್ಯಕ್ರಮದ ಲಾಂಛನವನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅನಾವರಣಗೊಳಿಸಲಾಯಿತು.
ಬೆಳಗಾವಿಯಲ್ಲಿ ಇದೇ ಡಿಸೆಂಬರ್ 26 ಹಾಗೂ 27 ರಂದು ಗಾಂಧಿ ಭಾರತ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಮುಂಬರುವ 2025ರ ಅಕ್ಟೋಬರ್ 2ರ ವರೆಗೆ ರಾಜ್ಯದಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಗಾಂಧೀಜಿಯವರ ಬದುಕು, ಹೋರಾಟ, ಸ್ವಾತಂತ್ರ್ಯ ಚಳುವಳಿ ಕುರಿತು ಮಕ್ಕಳು, ಯುವಜನರು ಸೇರಿದಂತೆ ಎಲ್ಲಾ ವಯೋಮಾನದ ಜನರಲ್ಲಿ ದೇಶಾಭಿಮಾನ, ಸತ್ಯ, ಅಹಿಂಸೆ, ಆರ್ಥಿಕ ಚಿಂತನೆಗಳು, ಸ್ವರಾಜ್, ಅಸ್ಪೃಶ್ಯತೆ ನಿವಾರಣೆ ಮತ್ತಿತರ ವಿಚಾರಗಳ ಮೇಲೆ ಬೆಳಕು ಚೆಲ್ಲುವ ಕಾರ್ಯಕ್ರಮಗಳನ್ನು ಸರ್ಕಾರ ಆಯೋಜಿಸುತ್ತಿದೆ.
ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಪ್ರಸಕ್ತ ವರ್ಷದುದ್ದಕ್ಕೂ ಆಯೋಜಿಸಿರುವ ಗಾಂಧಿ ಭಾರತ ಕಾರ್ಯಕ್ರಮದ ಲಾಂಛನವನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ… pic.twitter.com/oYhcV3pzyo
— DIPR Karnataka (@KarnatakaVarthe) December 9, 2024