ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಎಸ್.ಎಂ ಕೃಷ್ಣ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಈ ಕುರಿತು ಡಿಸಿಎಂ ಡಿಕೆಶಿ ಟ್ವೀಟ್ ಮಾಡಿದ್ದು, ಆತ್ಮೀಯರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್.ಎಂ ಕೃಷ್ಣ ಅವರ ಸದಾಶಿವನಗರ ನಿವಾಸಕ್ಕೆ ಇಂದು ಭೇಟಿ ಅಂತಿಮ ದರ್ಶನ ಪಡೆದೆ. ನನ್ನ ರಾಜಕೀಯ ಮಾರ್ಗದರ್ಶಿಗಳಾಗಿದ್ದ ಕೃಷ್ಣ ಅವರ ಜೊತೆ ಕಳೆದ ನೆನಪುಗಳು ಸ್ಮೃತಿಪಟಲದಲ್ಲಿ ಹಾದುಹೋದವು. ಅವರ ದೂರದೃಷ್ಟಿಯ ನಾಯಕತ್ವ ಹಾಗೂ ಕರ್ನಾಟಕಕ್ಕೆ ನೀಡಿದ ಕೊಡುಗೆಗಳು ಅವಿಸ್ಮರಣೀಯ ಎಂದಿದ್ದಾರೆ.
ಆತ್ಮೀಯರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್.ಎಂ ಕೃಷ್ಣ ಅವರ ಸದಾಶಿವನಗರ ನಿವಾಸಕ್ಕೆ ಇಂದು ಭೇಟಿ ಅಂತಿಮ ದರ್ಶನ ಪಡೆದೆ. ನನ್ನ ರಾಜಕೀಯ ಮಾರ್ಗದರ್ಶಿಗಳಾಗಿದ್ದ ಕೃಷ್ಣ ಅವರ ಜೊತೆ ಕಳೆದ ನೆನಪುಗಳು ಸ್ಮೃತಿಪಟಲದಲ್ಲಿ ಹಾದುಹೋದವು. ಅವರ ದೂರದೃಷ್ಟಿಯ ನಾಯಕತ್ವ ಹಾಗೂ ಕರ್ನಾಟಕಕ್ಕೆ ನೀಡಿದ ಕೊಡುಗೆಗಳು ಅವಿಸ್ಮರಣೀಯ. pic.twitter.com/DgBKrw3ML3
— DK Shivakumar (@DKShivakumar) December 10, 2024