ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಆಪ್ತ, ಕೊಳ್ಳೇಗಾಲದ ಮಾಜಿ ಶಾಸಕ ಎಸ್.ಜಯಣ್ಣ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.
ಅನಾರೋಗ್ಯದಿಂದ, ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಮಾಜಿ ಶಾಸಕ ಎಸ್.ಜಯಣ್ಣ ಇಂದು ಆಸ್ಪತ್ರೆಗೆ ತೆರಳುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ನಾಳೆ ಕೊಳ್ಳೇಗಾಲದಲ್ಲಿ ಜಯಣ್ಣ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿದೆ.
ಜಯಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಡಿ.7 ರಂದು ಸಿಎಂ ಸಿದ್ದರಾಮಯ್ಯ ಜಯಣ್ಣ ಮನೆಗೆ ಹೋಗಿ ಊಟ ಮಾಡಿ ಬಂದಿದ್ದರು.