ಬೆಂಗಳೂರು : ನಾಳೆ ಮಧ್ಯಾಹ್ನ 3 ಗಂಟೆಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆಯು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ನೆರವೇರಲಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್ ಎಂ ಕೃಷ್ಣ ಅವರ ಅಂತ್ಯಕ್ರಿಯೆ ನಡೆಯಲಿದೆ ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆಯು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ನೆರವೇರಲಿದ್ದು, ಅಂತ್ಯಕ್ರಿಯೆ ನಡೆಯಲಿರುವ ಸ್ಥಳ ಪರಿಶೀಲನೆ ನಡೆಸಿ ಡಿಸಿಎಂ ಡಿಕೆಶಿ ಮಾತನಾಡಿದ್ದಾರೆ.
“ನನ್ನನ್ನು ಮಗನಂತೆ ಕಂಡರು, ರಾಜಕೀಯ ಶಕ್ತಿ ತುಂಬಿದರು”
ಅಜಾತಶತ್ರು ಶ್ರೀ ಎಸ್.ಎಂ. ಕೃಷ್ಣ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ. #SMKrishna pic.twitter.com/y8VQ9KbtPV— DK Shivakumar (@DKShivakumar) December 10, 2024