ಬೆಂಗಳೂರು: ನಟ ಶಿವರಾಜ್ ಕುಮಾರ್ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇದೀಗ ಅವರು ಅಮೆರಿಕಾಗೆ ತೆರಳುವ ದಿನಾಂಕ ನಿಗದಿಯಾಗಿದ್ದು, ಶಸ್ತ್ರಚಿಕಿತ್ಸೆಗೆ ಡೇಟ್ ಕೂಡ ಫಿಕ್ಸ್ ಆಗಿದೆ.
ಶಿವರಾಜ್ ಕುಮಾರ್ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳುತ್ತಿದ್ದು, ಸರ್ಜರಿಗೆ ಒಳಗಾಗಲಿದ್ದಾರೆ. ಡಿಸೆಂಬರ್ 18ರಂದು ಶಿವರಾಜ್ ಕುಮಾರ್ ಅಮೆರಿಕಾಗೆ ತೆರಳುತ್ತಿದ್ದಾರೆ.
ಅಮೆರಿಕಾದ ಫ್ಲೋರಿಡಾದಲ್ಲಿರುವ ಮಿಯಾಮಿಯಲ್ಲಿ ಡಿಸೆಂಬರ್ 24ರಂದು ಶಿವರಾಜ್ ಕುಮಾರ್ ಅವರಿಗೆ ಸರ್ಜರಿ ನಡೆಯಲಿದೆ ಎಂದು ತಿಳಿದುಬಂದಿದೆ.
ಇನ್ನು ಈ ಬಗ್ಗೆ ಸ್ವತಃ ಶಿವರಾಜ್ ಕುಮಾರ್ ಚಿಕಿತ್ಸೆಗಾಗಿ ಅಮೆರಿಕಾಗೆ ಹೋಗುತ್ತಿರುವುದಾಗಿ ತಿಳಿಸಿದ್ದರು. ಅಲ್ಲದೇ ಸರ್ಜರಿ ಬಳಿಕ ಕೆಲ ತಿಂಗಳು ವಿಶ್ರಾಂತಿ ಪಡೆಯಲಿದ್ದಾರಂತೆ.