ಬೆಳಗಾವಿ : 2 ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದವರು ಹೋರಾಟ ನಡೆಸುತ್ತಿದ್ದು, ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.
ಪ್ರತಿಭಟನಾಕಾರರು ಎಂಎಲ್ ಸಿ ಕಾರಿಗೆ ಕಲ್ಲು ತೂರಿದ್ದು, ಗಾಜು ಗಾಜು ಪುಡಿ ಪುಡಿ ಮಾಡಿದ್ದಾರೆ. ಈ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟ ತೀವ್ರಗೊಂಡಿದ್ದು, ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆಇಂದು 2 ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದವರು ಹೋರಾಟ ನಡೆಸುತ್ತಿದ್ದು, ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ಹಿನ್ನೆಲೆ ಕಾನೂನು ಸುವ್ಗವಸ್ಥೆ ಎಡಿಜಿಪಿ ಹಿತೇಂದ್ರ ಮತ್ತು ಪೊಲೀಸ್ ಸಿಬ್ಬಂದಿಗಳು ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಿದ್ದಾರೆ.
ಲಾಠಿ ಏಟಿಗೆ 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾಠಿ ಚಾರ್ಜ್ ಮಾಡುತ್ತಿದ್ದಂತೆ ಪ್ರತಿಭಟನಾಕಾರರ ಆಕ್ರೋಶ ಮತ್ತಷ್ಟು ಹೆಚ್ಚಿದ್ದು, ಸ್ಥಳದಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಎಂಎಲ್ ಸಿ ಯೊಬ್ಬರಿಗೆಸೇರಿದ ಕಾರು, ಪೊಲೀಸ್ ವಾಹನಗಳ ಮೇಲೂ ಕಲ್ಲು ತೂರಾಟ ನಡೆಸಲಾಗಿದ್ದು, ವಾಹನಗಳ ಗಾಜು ಪುಡಿಪುಡಿಯಾಗಿವೆ.