HomeKarnatakaBIG NEWS : ಮಾಜಿ ಶಾಸಕ, ಆಪ್ತ ಎಸ್.ಜಯಣ್ಣ ನಿಧನಕ್ಕೆ 'CM ಸಿದ್ದರಾಮಯ್ಯ' ಸಂತಾಪ.!

BIG NEWS : ಮಾಜಿ ಶಾಸಕ, ಆಪ್ತ ಎಸ್.ಜಯಣ್ಣ ನಿಧನಕ್ಕೆ ‘CM ಸಿದ್ದರಾಮಯ್ಯ’ ಸಂತಾಪ.!

ಬೆಂಗಳೂರು : ಕೊಳ್ಳೇಗಾಲದ ಮಾಜಿ ಶಾಸಕರು, ಉಗ್ರಾಣ ನಿಗಮದ ಅಧ್ಯಕ್ಷರು ಆದ ಜಯಣ್ಣ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ”ಎಸ್.ಎಂ.ಕೃಷ್ಣ ಅವರ ಸಾವಿನ ಆಘಾತದಿಂದ ಚೇತರಿಸಿಕೊಳ್ಳುವ ಮುನ್ನವೇ ಜಯಣ್ಣ ಅವರ ಸಾವಿನ ಸುದ್ದಿ ಮತ್ತೊಂದು ಆಘಾತ ತಂದಿದೆ. ಜಯಣ್ಣ ನನ್ನ ಆತ್ಮೀಯರು. ನಮ್ಮ ನಡುವೆ ದೀರ್ಘಕಾಲದ ಒಡನಾಟವಿತ್ತು. 1994 ರಲ್ಲಿ ಜೆಡಿಎಸ್ ನಿಂದ ಹಾಗೂ 2013ರಲ್ಲಿ ಕಾಂಗ್ರೆಸ್ ಪಕ್ಷದಿಂದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದರು. ಪಕ್ಷ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಶ್ರಮವಹಿಸಿ ಕೆಲಸ ಮಾಡಿದ್ದ ಜಯಣ್ಣ ಜನಾನುರಾಗಿ ಶಾಸಕರಾಗಿದ್ದರು. ಜನರ ಕಷ್ಟಗಳಿಗೆ ಸದಾ ಮಿಡಿಯುತ್ತಿದ್ದರು. ಡಿಸೆಂಬರ್ ಏಳರಂದು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ನನ್ನ ಜೊತೆಗಿದ್ದರು. ಅವರ ಮನೆಯಲ್ಲಿಯೇ ಊಟ ಮಾಡಿ ಬಂದಿದ್ದೆ. ಜಯಣ್ಣ ಅವರ ಸಾವು ವೈಯಕ್ತಿಕವಾಗಿ ಆಘಾತ ತಂದಿದೆ. ಅವರ ನಿಧನದಿಂದ ಜನಾನುರಾಗಿ ರಾಜಕಾರಣಿಯನ್ನು ನಾಡು ಕಳೆದುಕೊಂಡಂತಾಗಿದೆ. ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಿಎಂ ವಿಧಾನಸಭೆಯಲ್ಲಿ ಸಂತಾಪದ ನುಡಿಗಳನ್ನಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular