ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಣಂತಿ ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಜಾಗನೂರಹಟ್ಟಿ ಗ್ರಾಮದ ರೋಜಮ್ಮ(25) ಮೃತಪಟ್ಟವರು ಎನ್ನಲಾಗಿದೆ.
ಚಿತ್ರದುರ್ಗ ಜಿಲ್ಲಾಸ್ಪತ್ರೆ ವೈದ್ಯರ ವಿರುದ್ಧ ನಿರ್ಲಕ್ಷ್ಯದ ಆರೋಪ ಕೇಳಿ ಬಂದಿದೆ. ಅಕ್ಟೋಬರ್ 31 ರಂದು ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಯಾಗಿತ್ತು. ರೋಜಮ್ಮ ಮೂರನೇ ಮಗುವಿಗೆ ಜನ್ಮ ನೀಡಿದ್ದರು. ಅವರಿಗೆ ಡಾ. ರೂಪಶ್ರೀ ಸಿಜೇರಿಯನ್ ಮಾಡಿದ್ದರು. ಸಿಜೇರಿಯನ್ ಮಾಡಿ ಹೊಲಿಗೆ ಹಾಕಿದ ಭಾಗದಲ್ಲಿ ನೋವು ಕಾಣಿಸಿಕೊಂಡಿತ್ತು.
ಆ ಭಾಗದಲ್ಲಿ ಇನ್ಫೆಕ್ಷನ್ ಆಗಿತ್ತು. ವಾಂತಿ, ಭೇದಿ, ಹೊಟ್ಟೆ ನೋವು ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ರೋಜಮ್ಮ ಸಾವನ್ನಪ್ಪಿದ್ದಾರೆ. 40 ದಿನದ ಮಗುವನ್ನು ಅಗಲಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ರೋಜಮ್ಮ ಸಾವಾಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.