ಬಳ್ಳಾರಿ : ಕರ್ನಾಟಕ ಭೋವಿ ಅಭಿವೃದ್ದಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ಉಚಿತ ಪತ್ರಿಕೋದ್ಯಮ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಪರಿಶಿಷ್ಟ ಜಾತಿಯ ಭೋವಿ ಸಮುದಾಯದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ಸರ್ಕಾರವು ಎಲೆಕ್ಟ್ರಾನಿಕ್ ಮಾಧ್ಯಮ ವಿಷಯದಲ್ಲಿ ಪ್ರಾಯೋಗಿಕ ತರಬೇತಿ ಮತ್ತು ಕ್ಷೇತ್ರದಲ್ಲಿನ ಅನುಭವ ನೀಡಲು ವಸತಿ ಸಹಿತ 60 ದಿನಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಮತ್ತು ಅಡ್ವರ್ಟೈಸಿಂಗ್ ಲಿಮಿಟೆಡ್, ಬೆಂಗಳೂರು ಇವರಿಗೆ ಷರತ್ತುಗೊಳಪಟ್ಟು ಉಚಿತ ಪತ್ರಿಕೋದ್ಯಮ ತರಬೇತಿ ನೀಡಲಾಗುತ್ತದೆ.
ಎಸ್ಎಸ್ಎಲ್ಸಿ, ಪಿಯುಸಿ, ಡಿಪ್ಲೋಮೋ ವಿದ್ಯಾರ್ಹತೆ ಹೊಂದಿರಬೇಕು. ಅರ್ಜಿ ನಮೂನೆಯನ್ನು ಕರ್ನಾಟಕ ಭೋವಿ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿಯಿಂದ ಉಚಿತವಾಗಿ ಪಡೆದು, ಭರ್ತಿ ಮಾಡಿ ಡಿ.20 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಬೆಳಗಲ್ ಕ್ರಾಸ್ನ ಸೆಂಟ್ ಜೋಸೆಫ್ ಬಾಲಕಿಯರ ಪ್ರೌಢಶಾಲೆಯ ಎದುರುಗಡೆಯ ಕರ್ನಾಟಕ ಭೋವಿ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.