ಬೆಂಗಳೂರು : ಇಂದು ಎಂದಿನಂತೆ ಬೆಂಗಳೂರಿನಲ್ಲಿ ನಮ್ಮ ‘ಮೆಟ್ರೋ ಸಂಚಾರ’ ಇರಲಿದೆ ಎಂದು ಮೆಟ್ರೋ ರೈಲು ನಿಗಮ ನಿಯಮಿತ ಪ್ರಕಟಣೆ ತಿಳಿಸಿದೆ.
ಮಾಜಿ ಮುಖ್ಯಮಂತ್ರಿ ಶ್ರೀ ಎಸ್ಎಂ ಕೃಷ್ಣ ಅವರ ನಿಧನದ ಹಿನ್ನೆಲೆ ನಾಳೆ ಸಾರ್ವಜನಿಕ ರಜೆ ಘೋಷಣೆ ಹಿನ್ನಲೆಯಲ್ಲಿ ‘ನಮ್ಮ ಮೆಟ್ರೋ’ ಕೂಡ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಸುಳ್ಳು ವದಂತಿ ಹರಡಿದೆ. ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳು ನಾಳೆ ಕಾರ್ಯನಿರ್ವಹಿಸುತ್ತಿಲ್ಲವಾದರೂ ‘ನಮ್ಮ ಮೆಟ್ರೋ’ ಎಂದಿನಂತೆ ಸೇವೆ ಸಲ್ಲಿಸಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ ಎಂದು ಬಿಎಂಆರ್ ಸಿಎಲ್ ಪ್ರಕಟಣೆ ಹೊರಡಿಸಿದೆ.
ಮಾಜಿ ಮುಖ್ಯಮಂತ್ರಿ ಶ್ರೀ ಎಸ್ಎಂ ಕೃಷ್ಣ ಅವರ ನಿಧನದ ಹಿನ್ನೆಲೆ ನಾಳೆ ಸಾರ್ವಜನಿಕ ರಜೆ ಘೋಷಣೆ ಹಿನ್ನಲೆಯಲ್ಲಿ ‘ನಮ್ಮ ಮೆಟ್ರೋ’ ಕೂಡ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಸುಳ್ಳು ವದಂತಿ ಹರಡಿದೆ.
— ನಮ್ಮ ಮೆಟ್ರೋ (@OfficialBMRCL) December 10, 2024