BREAKING: ಬಳ್ಳಾರಿ, ಬೆಳಗಾವಿ, ರಾಯಚೂರು ಬಳಿಕ ಚಿತ್ರದುರ್ಗದಲ್ಲೂ ಬಾಣಂತಿ ಸಾವು.!

ಚಿತ್ರದುರ್ಗ: ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ 25 ವರ್ಷದ ಗರ್ಭಿಣಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರನ್ನು ಚಳ್ಳಕೆರೆ ತಾಲ್ಲೂಕಿನ ಜಗಳೂರುಹಟ್ಟಿ ಗ್ರಾಮದ ರೋಜಮ್ಮ ಎಂದು ಗುರುತಿಸಲಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಡಾ.ರೂಪಶ್ರೀ ಅವರು ಸಿಸೇರಿಯನ್ ಹೆರಿಗೆ ಮಾಡಿಸಿಕೊಂಡಿದ್ದರು. ಡಿಸ್ಚಾರ್ಜ್ ಆದ ನಂತರ, ಅವಳು ಮನೆಗೆ ಹಿಂದಿರುಗಿದ್ದರು. ಆದರೆ ಹೊಲಿಗೆ ಹಾಕಿದ್ದ ಭಾಗದಲ್ಲಿ ತೀವ್ರ ನೋವು ಕಾಣಿಸಿಕೊಂಡಿದೆ.

ಅಕ್ಟೋಬರ್ 31 ರಂದು ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಯಾಗಿತ್ತು. ರೋಜಮ್ಮ ಮೂರನೇ ಮಗುವಿಗೆ ಜನ್ಮ ನೀಡಿದ್ದರು. ಅವರಿಗೆ ಡಾ. ರೂಪಶ್ರೀ ಸಿಜೇರಿಯನ್ ಮಾಡಿದ್ದರು. ಸಿಜೇರಿಯನ್ ಮಾಡಿ ಹೊಲಿಗೆ ಹಾಕಿದ ಭಾಗದಲ್ಲಿ ನೋವು ಕಾಣಿಸಿಕೊಂಡಿತ್ತು. ಅಲ್ಲದೇ ಆ ಭಾಗದಲ್ಲಿ ಇನ್ಫೆಕ್ಷನ್ ಆಗಿತ್ತು.

ವಾಂತಿ, ಭೇದಿ, ಹೊಟ್ಟೆ ನೋವು ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ರೋಜಮ್ಮ ಸಾವನ್ನಪ್ಪಿದ್ದಾರೆಅಸಮರ್ಪಕ ಚಿಕಿತ್ಸೆ ನೀಡಿದ್ದರಿಂದ ರೋಜಮ್ಮ ಮೃತಪಟ್ಟಿದ್ದಾರೆ ಎಂದು ಅವರ ಪತಿ ವೆಂಕಟೇಶ್ ಮತ್ತು ಸಹೋದರಿ ಶಾರದಮ್ಮ ಆರೋಪಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read