BREAKING NEWS: ಪಂಚಭೂತಗಳಲ್ಲಿ ಲೀನರಾದ ಮಾಜಿ ಸಿಎಂ ಎಸ್.ಎಂ.ಕೃಷ್ಣ: ಐಟಿ ಹಬ್ ದೊರೆಗೆ ಕಣ್ಣೀರ ವಿದಾಯ

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (92) ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಇಂದು ಮಂಡ್ಯ ಜಿಲ್ಲೆಯ ಮದ್ದೂರಿನ ಅವರ ಹುಟ್ಟೂರಾದ ಸೋಮನಹಳ್ಲಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರು ಡಿ.10ರಂದು ಬೆಳಿಗ್ಗೆ ಬೆಂಗಳೂರಿನ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದರು. ಇಂದು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಕೆಫಿ ಡೇ ಆವರಣದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಡಾ.ಭಾನುಪ್ರಕಾಶ್ ಶರ್ಮ ಅವರ ನೇತೃತ್ವದಲ್ಲಿ 15 ಪುರೋಹಿತರ ತಂಡ ವೇದಮಂತ್ರಗಳ ಪಠಣದ ಮೂಲಕ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಎಸ್.ಎಂ.ಕೃಷ್ಣ ಮೊಮ್ಮಗ, ಡಿಸಿಎಂ ಡಿ.ಕೆ.ಶಿವಕುಮಾರ್ ಅಳಿಯ ಅಮರ್ತ್ಯ ಅಂತಿಮ ವಿಧಿವಿಧಾನಗಳನ್ನು ನೆರವೇಸಿದರು. ಬಳಿಕ ಸರ್ಕಾರಿ ಗೌರವದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಹೆಚ್.ಕೆ.ಪಾಟೀಲ್, ಮಹದೇವಪ್ಪ ಸೇರಿದಂತೆ ಹಲವು ಸಚಿವರು, ಶಾಸಕರು, ಮಾಜಿ ಸಿಎಂ ಯಡಿಯೂರಪ್ಪ, ವಿಪಕ್ಷ ನಯಕ ಆರ್.ಅಶೋಕ್, ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಅಂತಿಮ ಗೌರವ ನಮನ ಸಲ್ಲಿಸಿದರು.

ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಉಪಸ್ಥಿತರಿದ್ದರು. ಬಳಿಕ ಮೂರು ಸುತ್ತು ಕುಷಾಲತೋಪು ಸಿಡಿಸಿದ ಬಳಿಕ ರಾಷ್ಟ್ರಗೀತೆಯೊಂದಿಗೆ ಸರ್ಕಾರಿ ಗೌರವ ಸಲ್ಲಿಸಲಾಯಿತು. ಎಲ್ಲರೂ ಮೌನಾಚರಣೆ ಮೂಲಕ ಅಂತಿಮ ವಿದಾಯ ಹೇಳಿದರು. ಹೂವಿನ ಪಲ್ಲಕ್ಕಿಯಲ್ಲಿ ಪಾರ್ಥಿವಶರೀರದ ಮೆರವಣಿಗೆ ಮಾಡಲಾಯಿತು.

ಬಳಿಕ ಎಸ್.ಎಂ.ಕೃಷ್ಣ ಅವರ ಪಾರ್ಥಿವಶರೀರವನ್ನು ಶ್ರೀಗಂಧದ ಕಟ್ಟಿಗೆಗಳಿದ್ದ ಚಿತೆಯ ಮೇಲಿಡಲಾಯಿತು. ಕುಟುಂಬ ಸದಸ್ಯರಿಂದ ಅಂತಿಮ ವಿಧಿ ವಿಧಾನ ಸಲ್ಲಿಸಲಾಯಿತು. ಬಳಿಕ ಎಸ್.ಎಂ.ಕೃಷ್ಣ ಚಿತೆಗೆ ಅಗ್ನಿಸ್ಪರ್ಶ ಮಾಡಲಾಯಿತು. ಮಾಜಿ ಸಿಎಂ, ಮುತ್ಸದ್ದಿ ರಾಜಕಾರಣಿ ಎಸ್.ಎಂ.ಕೃಷ್ಣ ಪಂಚಭೂತಗಳಲ್ಲಿ ಲೀನರಾದರು. ಸಿಲಿಕಾನ್ ಸಿಟಿ, ಬ್ರ್ಯಾಂಡ್ ಬೆಂಗಳೂರು ಕನಸುಗಾರ, ಐಟಿ ಹಬ್ ದೊರೆ ಎಸ್.ಎಂ.ಕೃಷ್ಣಗೆ ಕಣ್ಣೀರ ವಿದಾಯ ಹೇಳಲಾಯಿತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read