ಹೈದರಾಬಾದ್: ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತೆಲುಗು ನಟ ಮೋಹನ್ ಬಾಬು ವಿರುದ್ಧ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೋಹನ್ ಬಾಬು ಅವರ ಜಲಪಲ್ಲಿ ನಿವಾಸಕ್ಕೆ ಮಾಧ್ಯಮ ಪ್ರತಿನಿಧಿಗಳು ಭೇಟಿ ನೀಡಿದ ಸಂದರ್ಭದಲ್ಲಿ ನಟ ಮೋಹನ್ ಬಾಬು ಮತ್ತು ಅವರ ಹಿರಿಯ ಪುತ್ರ ವಿಷ್ಣು ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದ್ದು, ಗಾಯಗೊಂಡ ಪತ್ರಕರ್ತರಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಬಗ್ಗೆ ಹಲ್ಲೆಗೊಳಗಾದ ಪತ್ರಕರ್ತರು ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ನಡುವೆ ಮೋಹನ್ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ.