ಸೆಪ್ಟೆಂಬರ್ 25 ರಂದು ಬಿಡುಗಡೆಯಾಗಲಿದೆ ನಂದಮೂರಿ ಬಾಲಕೃಷ್ಣ ಅಭಿನಯದ ‘ಅಖಂಡ 2’ 12-12-2024 9:23AM IST / No Comments / Posted In: Latest News 2021 ರಲ್ಲಿ ತೆರೆ ಕಂಡು ಸೂಪರ್ ಡೂಪರ್ ಹಿಟ್ ಆಗಿದ್ದ ನಂದಮೂರಿ ಬಾಲಕೃಷ್ಣ ಅಭಿನಯದ ‘ಅಖಂಡ’ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಈ ಚಿತ್ರದ ಮುಂದುವರೆದ ಭಾಗ ‘ಅಖಂಡ2’ ಶೂಟಿಂಗ್ ಪ್ರಾರಂಭ ಮಾಡಲಾಗಿದ್ದು, ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಮುಂದಿನ ವರ್ಷ ಸೆಪ್ಟೆಂಬರ್ 25 ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಈ ಚಿತ್ರದ ನಿರ್ಮಾಪಕರು ಬದಲಾಗಿದ್ದು, 14 ರೀಲ್ಸ್ ಪ್ಲಸ್ ಬ್ಯಾನರ್ ನಲ್ಲಿ ರಾಮ್ ಅಚಂತ ಮತ್ತು ಗೋಪಿ ಅಚಂತ ನಿರ್ಮಾಣ ಮಾಡುತ್ತಿದ್ದಾರೆ. ಬೋಯಪತಿ ಶ್ರೀನು ನಿರ್ದೇಶಿಸುತ್ತಿದ್ದು,ಥಮನ್ ಎಸ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.ಸಿ.ರಾಮಪ್ರಸಾದ್ ಛಾಯಾಗ್ರಹಣವಿದೆ.