ಬೆಂಗಳೂರು: ಎರಡು ಎಕರೆವರೆಗಿನ ಜಮೀನಿಗೆ ಭೂ ಪರಿವರ್ತನೆಯಿಂದ ವಿನಾಯಿತಿ ನೀಡಲು ಕಾಯ್ದೆಗೆ ತಿದ್ದುಪಡಿ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ.
ರಾಜ್ಯದಲ್ಲಿ ಹೊಸ ಕೈಗಾರಿಕೆಗಳಿಗೆ ಉತ್ತೇಜನ ನೀಡ ಕ್ರಮ ಕೈಗೊಳ್ಳಲಾಗಿದೆ. ಎರಡು ಎಕರೆವರೆಗಿನ ಕೃಷಿ ಭೂಮಿಯನ್ನು ಭೂ ಪರಿವರ್ತನೆ ಇಲ್ಲದೆ ಕೈಗಾರಿಕಾ ಉದ್ದೇಶಕ್ಕಾಗಿ ಬಳಕೆ ಮಾಡಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ.
ಭೂ ಪರಿವರ್ತನೆ ಪ್ರಕ್ರಿಯೆ ವಿಳಂಬದಿಂದಾಗಿ ಬಂಡವಾಳ ಹೂಡಿಕೆದಾರರು ಹಿಂದೇಟು ಹಾಕುತ್ತಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಸೆಕ್ಷನ್ 95ಕ್ಕೆ ತಿದ್ದುಪಡಿ ತರುವಂತೆ ಪ್ರಸ್ತಾವನೆ ಸಲ್ಲಿಸಿತ್ತು. ಇದರ ಅನ್ವಯ ಮಸೂದೆ ಸಿದ್ಧಪಡಿಸಲಾಗಿದೆ. ಸುವರ್ಣ ಸೌಧದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಸೂದೆಗೆ ಅನುಮೋದನೆ ಪಡೆದುಕೊಂಡು ಈ ಅಧಿವೇಶನದಲ್ಲಿಯೇ ಮಂಡಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.