ಬೆಂಗಳೂರು : ಬಿಗ್ ಬಾಸ್ ರನ್ನರ್ ಅಪ್ ಡ್ರೋನ್ ಪ್ರತಾಪ್ ಇದೀಗ ಮತ್ತೊಂದು ವಿಡಿಯೋದ ಮೂಲಕ ಸುದ್ದಿಯಾಗಿದ್ದಾರೆ.
ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ್ದು, ವಿಡಿಯೋ ಪರಿಸರ ಪ್ರೇಮಿಗಳ ಕಣ್ಣು ಕೆಂಪಗಾಗಿಸಿದೆ.
ವಿಜ್ಞಾನದ ಪ್ರಯೋಗದ ಹೆಸರಿನಲ್ಲಿ ವಿಡಿಯೋವೊಂದನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನೀರಿಗೆ ಸೋಡಿಯಮ್ ಕೆಮಿಕಲ್ ಹಾಕಿ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದಾರೆ. ಕೆಮಿಕಲ್ ಹಾಕಿದ್ದಾಗ ನೀರಿನಲ್ಲಿ ಬಾಂಬ್ ಬ್ಲಾಸ್ಟ್ ತರ ಸ್ಪೋಟವಾಗಿದೆ. ಇದನ್ನು ನೋಡಿ ಪ್ರತಾಪ್ ಜೋರಾಗಿ ನಕ್ಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಭಾರಿ ವೈರಲ್ ಆಗಿದೆ.
ಡ್ರೋನ್ ಮೂಲಕ ಬಹಳ ಸುದ್ದಿಯಾದ ಡ್ರೋನ್ ಪ್ರತಾಪ್ ಹಲವು ವಿವಾದಕ್ಕೆ ಈಡಾಗಿದ್ದರು. ಬಿಗ್ ಬಾಸ್ ಮನೆಗೆ ಹೋದ ಬಳಿಕ ಪ್ರತಾಪ್ ಹಲವು ಅಭಿಮಾನಿಗಳನ್ನು ಸಂಪಾದಿಸಿದ್ದರು.