alex Certify ಧಾರವಾಡದಲ್ಲಿ ನಡೆದ ಪಿಡಿಒ ಪರೀಕ್ಷೆಯಲ್ಲಿಯೂ ಅಕ್ರಮ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಧಾರವಾಡದಲ್ಲಿ ನಡೆದ ಪಿಡಿಒ ಪರೀಕ್ಷೆಯಲ್ಲಿಯೂ ಅಕ್ರಮ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಧಾರವಾಡ: ಡಿಸೆಂಬರ್ 8ರಂದು ಪಿಡಿಒ ನೇಮಕಾತಿಗಾಗಿ ನಡೆದಿದ್ದ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರ್ವ ಆರೋಪ ಕೇಳಿಬಂದಿದೆ. ಧಾರವಾಡದ ಕೆ ಎನ್
ಕೆ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿದೆ ಎಂದು ತಿಳಿದುಬಂದಿದೆ.

ಅಭ್ಯರ್ಥಿಗಳ ಕೈ ಸೇರುವ ಮೊದಲೇ ಪ್ರಶ್ನೆ ಪತ್ರಿಕೆ ಸೀಲ್ ಓಪನ್ ಮಾಡಲಾಗಿದೆ. ಸಾಮಾನ್ಯ ಜ್ಞಾನ ವಿಷಯಕ್ಕೆ ಸಂಬ್ಂಧಿಸಿದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು ಎಂಬ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಪ್ರಶ್ನೆ ಪತ್ರಿಕೆಗಳ ಬಂದಲ್ ನ್ನು ಪರೀಕ್ಷಾ ಕೊಠಡಿಯಲ್ಲಿ ಓಪನ್ ಮಾಡಬೇಕು. ಆದರೆ ಪ್ರಶ್ನೆ ಪತ್ರಿಕೆಯ ಸೀಲ್ ಮೊದಲೇ ಓಪನ್ ಮಾಡಿ ಬಳಿಕ ಮತ್ತೆ ಅಂಟಿಸಿದ್ದಾರೆ ಎನ್ನಲಾಗಿದೆ.

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ. ಈ ಬಾರಿಯೂ ಪಾರದರ್ಶಕ ಪರೀಕ್ಷೆ ನಡೆಸಲು ಕೆಪಿಎಸ್ ಸಿ ವಿಫಲವಾಯ್ತಾ? ಎಂಬ ಪ್ರಶ್ನೆ ಮೂಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...