alex Certify BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : 2025 ನೇ ಸಾಲಿನ ‘ಪರಿಮಿತ ರಜಾ ದಿನಗಳ ಪಟ್ಟಿ’ ಬಿಡುಗಡೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : 2025 ನೇ ಸಾಲಿನ ‘ಪರಿಮಿತ ರಜಾ ದಿನಗಳ ಪಟ್ಟಿ’ ಬಿಡುಗಡೆ.!

ಬೆಂಗಳೂರು : ರಾಜ್ಯ ಸರ್ಕಾರ 2025 ನೇ ಸಾಲಿನ ‘ಪರಿಮಿತ ರಜಾ ದಿನಗಳ ಪಟ್ಟಿ’ ಬಿಡುಗಡೆ ಮಾಡಿದೆ.
ಸರ್ಕಾರವು 2025ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಸಾರ್ವಜನಿಕ ಮಾಹಿತಿಗಾಗಿ ಈ ಕೆಳಕಂಡಂತೆ ಪ್ರಕಟಿಸಲಾಗಿದೆ.

ಸೂಚನೆ:
1. ಈ ರಜಾ ಪಟ್ಟಿಯಲ್ಲಿ ಭಾನುವಾರಗಳಂದು ಬರುವ ಗಣರಾಜ್ಯೋತ್ಸವ (26.01.2025), ಯುಗಾದಿ ಹಬ್ಬ (30.03.2025), ಮೊಹರಂ ಕಡೆ ದಿನ (06.07.2025) ಮತ್ತು ಮಹಾಲಯ ಅಮವಾಸ್ಯೆ (21.09.2025) ಹಾಗೂ ಎರಡನೇ ಶನಿವಾರದಂದು ಬರುವ ಕನಕದಾಸ ಜಯಂತಿ (08.11.2025) ಈ ರಜೆ ಪಟ್ಟಿಯಲ್ಲಿ ನಮೂದಿಸಿರುವುದಿಲ್ಲ.

2. ಸಾರ್ವತ್ರಿಕ ರಜಾ ದಿನಗಳಲ್ಲಿ ರಾಜ್ಯಾದ್ಯಂತ ಸರ್ಕಾರಿ ಕಛೇರಿಗಳು ಮುಚ್ಚಲ್ಪಡುತ್ತವೆ. ಕಛೇರಿಯ ಜರೂರು ಕೆಲಸವನ್ನು ವಿಲೇವಾರಿ ಮಾಡುವ ಬಗ್ಗೆ ಇಲಾಖಾ ಮುಖ್ಯಸ್ಥರುಗಳು ಸೂಕ್ತ ವ್ಯವಸ್ಥೆ ಮಾಡತಕ್ಕದ್ದು.

3. ಈ ಪಟ್ಟಿಯಲ್ಲಿ ಸೇರಿಸಲಾಗಿರುವ ಮುಸಲ್ಮಾನ ಬಾಂಧವರ ಹಬ್ಬಗಳು ನಿಗಧಿತ ದಿನಾಂಕದಂದು ಬೀಳದಿದ್ದರೆ ಸರ್ಕಾರಿ ಸೇವೆಯಲ್ಲಿರುವ ಮುಸಲ್ಮಾನ ಬಾಂಧವರಿಗೆ ನಿಗಧಿತ ರಜೆಗೆ ಬದಲಾಗಿ ಹಬ್ಬದ ದಿವಸ ರಜಾ ಮಂಜೂರು ಮಾಡಬಹುದು.

4. ದಿನಾಂಕ:03.09.2025 (ಬುಧವಾರ) ಕ್ಕೆಲ್ ಮೂಹೂರ್ತ, ದಿನಾಂಕ:18.10.2025 (ಶನಿವಾರ) ತುಲಾ ಸಂಕ್ರಮಣ ಹಾಗೂ ದಿನಾಂಕ:05.12.2025 (ಶುಕ್ರವಾರ) ಹುತ್ತರಿ ಹಬ್ಬವನ್ನು ಆಚರಿಸಲು ಕೊಡಗು ಜಿಲ್ಲೆಗೆ ಮಾತ್ರ ಅನ್ವಯವಾಗುವಂತೆ ಸ್ಥಳೀಯ ಸಾರ್ವತ್ರಿಕ ರಜೆಯನ್ನು ಘೋಷಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...