ಬೆಳಗಾವಿ : ವಿಧಾನಸಭೆ ಕಲಾಪ ಇಂದು ಮತ್ತೆ ಆರಂಭವಾಗಿದ್ದು, ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.
ವಿಧಿವಶರಾದ ಮಾಜಿ ಶಾಸಕ ಆರ್.ನಾರಾಯಣ್ ಹಾಗೂ ಮಾಜಿ ಶಾಸಕ ಎಸ್.ಜಯಣ್ಣ ಅವರಿಗೆ ವಿಧಾನಸಭೆ ಕಲಾಪದಲ್ಲಿ ಸಂತಾಪ ಸೂಚಿಸಲಾಯಿತು. ಮೊನ್ನೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರಿಗೆ ಸಂತಾಪ ಸೂಚಿಸಲಾಗಿತ್ತು.
ವಿಧಾನಸಭೆಯಲ್ಲಿ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ. ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನದ ಹಿನ್ನೆಲೆ ಬುಧವಾರದ ವಿಧಾನಸಭೆ ಕಲಾಪವನ್ನು ಗುರುವಾರಕ್ಕೆ ಮುಂದೂಡಿಕೆ ಮಾಡಲಾಗಿತ್ತು. ಮಾಜಿ ಸಿಎಂ S.M ಕೃಷ್ಣ ನಿಧನರಾದ ಹಿನ್ನೆಲೆ ಮೂರು ದಿನ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗಿತ್ತು.ನಿನ್ನೆ ಸಂಜೆ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್ ಎಂ ಕೃಷ್ಣ ಅಂತ್ಯಕ್ರಿಯೆ ನೆರವೇರಿದ್ದು, ಪಂಚಭೂತಗಳಲ್ಲಿ ಎಸ್ ಎಂ ಕೃಷ್ಣ ಲೀನರಾಗಿದ್ದಾರೆ.