ಬೆಳಗಾವಿ : ‘ಪಂಚಮಸಾಲಿ’ ಸಮುದಾಯದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಲಾಠಿಚಾರ್ಜ್ ವಿಚಾರ ಸದನದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಯಿತು.
2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ಪಂಚಮಸಾಲಿ ಸಮುದಾಯದ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿರುವ ಕ್ರಮ ಖಂಡಿಸಿ ಬಿಜೆಪಿ ನಾಯಕರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಇತ್ತ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದಲ್ಲಿ ಅಧಿವೇಶನದಲ್ಲಿ ಇಂದು ದಿನವಿಡೀ ಪಂಚಮಸಾಲಿ ಸಮುದಾಯದ ಪ್ರತಿಭಟನೆ ವಿಚಾರವಾಗಿ ಚರ್ಚೆ ನಡೆಯಿತು. ಸದನದ ಬಾವಿಗಿಳಿದು ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ದು, ಸ್ಪೀಕರ್ ಕಲಾಪವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಿದ್ದಾರೆ.