alex Certify BIG NEWS: ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆಗೆ ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆಗೆ ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ರಾಯಚೂರಿನ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು 3 ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ಅಂತಿಮ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಸದಸ್ಯ ಶಶಿಲ್ ನಮೋಶಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ. ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಈಗಾಗಲೇ ಆಯೋಗದಲ್ಲಿ ಉಪ ಸಮಿತಿಯನ್ನು ರಚಿಸಲಾಗಿದ್ದು, ವರದಿ ಸ್ವೀಕೃತವಾದ ನಂತರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...