alex Certify ಕಂದಾಯ ಇಲಾಖೆ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ನೇಮಕಾತಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಅಂತಿಮ ಅಂಕ ಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಂದಾಯ ಇಲಾಖೆ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ನೇಮಕಾತಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಅಂತಿಮ ಅಂಕ ಪಟ್ಟಿ ಪ್ರಕಟ

ಬೆಂಗಳೂರು: VAO -ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ಅಂತಿಮ ಪಟ್ಟಿಯನ್ನು KEA ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಅರ್ಹರ ಅಂಕ ಪಟ್ಟಿಯನ್ನು ಆಯಾ ಜಿಲ್ಲಾಧಿಕಾರಿಗಳಿಗೆ ಕಳುಹಿಸಲಾಗುವುದು. ಬಳಿಕ ಅವರೇ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಿದ್ದಾರೆ.

ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ, ದಿನಾಂಕ 29.09.2024 ಮತ್ತು 26.10.2024 ರಂದು ಕಡ್ಡಾಯ ಕನ್ನಡ ಪರೀಕ್ಷೆಯನ್ನು ನಡೆಸಿ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಪ್ರಕಟಿಸಲಾಗಿರುತ್ತದೆ ಹಾಗೂ ದಿನಾಂಕ 27.10.2024 ರಂದು ಪತ್ರಿಕೆ-1 ಮತ್ತು ಪತ್ರಿಕೆ-2ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಅಭ್ಯರ್ಥಿಗಳು ಗಳಿಸಿದ ತಾತ್ಕಾಲಿಕ ಅಂಕಪಟ್ಟಿಯನ್ನು ದಿನಾಂಕ 27.11.2024 ರಂದು ಪ್ರಕಟಿಸಿ ದಿನಾಂಕ 28.11.2024 ರ ವರೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.

ಅದರಂತೆ ನಿಗದಿತ ದಿನಾಂಕದವರೆಗೆ ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು 2021 (ತಿದ್ದುಪಡಿ) ರಲ್ಲಿ ನಿರ್ದೇಶಿಸಿರುವಂತೆ, ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಟ 50 ಅಂಕಗಳು ಮತ್ತು ಪತ್ರಿಕೆ-1 ಮತ್ತು ಪತ್ರಿಕೆ-2 ರಲ್ಲಿ ಶೇ. 35 ರಷ್ಟು ಅಂಕಗಳನ್ನು ಗಳಿಸಿ ಅರ್ಹರಾದ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಮಾತ್ರ ದಿನಾಂಕ 12.12.2024 ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಮತ್ತು ಸದರಿ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲಾಗುವುದು. ಸಂಬಂಧಪಟ್ಟ ಜಿಲ್ಲಾಧಿಕಾರಿಯವರು ನಿಯಮಾನುಸಾರ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮವಹಿಸುವರು ಎಂದು ತಿಳಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...