HomeKarnatakaಹುಡುಗಿಗೆ ಮೆಸೇಜ್ ಕಳಿಸಿದ ವಿಚಾರಕ್ಕೆ ವಿದ್ಯಾರ್ಥಿ ಗುಂಪುಗಳ ನಡುವೆ ಹೊಡೆದಾಟ

ಹುಡುಗಿಗೆ ಮೆಸೇಜ್ ಕಳಿಸಿದ ವಿಚಾರಕ್ಕೆ ವಿದ್ಯಾರ್ಥಿ ಗುಂಪುಗಳ ನಡುವೆ ಹೊಡೆದಾಟ

ಕಲಬುರಗಿ: ಕಲಬುರಗಿಯ ಸಂಗಮೇಶ್ವರ ಕಾಲೋನಿಯಲ್ಲಿ ಹುಡುಗಿಗೆ ಮೆಸೇಜ್ ಕಳಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ವಿದ್ಯಾರ್ಥಿಗಳ ಎರಡು ಗ್ಯಾಂಗ್ ನಡುವೆ ಗಲಾಟೆಯಾಗಿದೆ.

ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಆಧರಿಸಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು 12ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ. ಶರಣಪ್ಪ ತಿಳಿಸಿದ್ದಾರೆ.

ಸಂಗಮೇಶ್ವರ ಕಾಲೋನಿಯಲ್ಲಿ ಹುಡುಗಿಯೊಬ್ಬಳಿಗೆ ಮೆಸೇಜ್ ಮಾಡಿದ್ದಕ್ಕೆ ಗಲಾಟೆಯಾಗಿದೆ. ಕುಡಿದ ಮತ್ತಿನಲ್ಲಿ ವಿದ್ಯಾರ್ಥಿಗಳು ಪರಸ್ಪರ ಗಲಾಟೆ ಮಾಡಿಕೊಂಡು ಕಲ್ಲು ತೂರಾಟ ನಡೆಸಿ ಬಡಿಗೆ, ದೊಣ್ಣೆಯಿಂದ ಹೊಡೆದಾಡಿಕೊಂಡಿದ್ದು, ಕೆಲವರಿಗೆ ಗಾಯಗಳಾಗಿವೆ. ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular