ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯಾದ್ಯಂತ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಂತೆಯೇ ರಾಜ್ಯದ ಹಲವು ಕಡೆ ಮೋಡ ಕವಿದ ವಾತಾವರಣವಿದ್ದು, ಹಲವು ಕಡೆ ತುಂತುರು ಮಳೆಯಾಗುತ್ತಿದೆ. ಮುಂದಿನ 5 ದಿನ ರಾಜ್ಯದ ಹಲವೆಡೆ ಭಾರಿ ‘ಮಳೆ’ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಒಳನಾಡಿನ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಹಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ತುಂತುರು ಮಳೆಯಾಗುತ್ತಿದ್ದು, ಹಲವೆಡೆ ಮೋಡ ಕವಿದ ವಾತಾವರಣವಿದೆ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಡ್ಯ,. ಮೈಸೂರು. ರಾಮನಗರ. ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ಸುತ್ತಾ ಮುತ್ತಾ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಮುಂಜಾಗೃತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.