ಬೆಳಗಾವಿ(ಸುವರ್ಣಸೌಧ): ರಾಜ್ಯಪಾಲರ ಅಧಿಕಾರಕ್ಕೆ ಹಿಂದಕ್ಕೆ ಪಡೆದು ಮುಖ್ಯಮಂತ್ರಿಯವರಿಗೆ ಕುಲಾಧಿಪತಿ ಅಧಿಕಾರ ನೀಡುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ ಸೇರಿದಂತೆ ವಿಧಾನಸಭೆಯಲ್ಲಿ 11 ಮಸೂದೆಗಳನ್ನು ಮಂಡಿಸಲಾಗಿದೆ.
ವಿಫಲವಾದ ಅಥವಾ ನಿಷ್ಕ್ರಿಯ ಕೊಳವೆ ಬಾವಿಗಳಲ್ಲಿ ಮಕ್ಕಳು ಬಿದ್ದು ಅವಘಡ ಸಂಭವಿಸಿದರೆ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಶಿಕ್ಷೆ ವಿಧಿಸುವ ಕರ್ನಾಟಕ ಅಂತರ್ಜಲ(ತಿದ್ದುಪಡಿ) ಮಸೂದೆ 2024 ಅನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ.
ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ(ತಿದ್ದುಪಡಿ) ಮಸೂದೆ, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳು(ತಿದ್ದುಪಡಿ) ಮಸೂದೆ, ಚಾಣಕ್ಯ ವಿಶ್ವವಿದ್ಯಾಲಯ(ತಿದ್ದುಪಡಿ) ಮಸೂದೆ, ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ(ತಿದ್ದುಪಡಿ) ಮಸೂದೆ ಮಂಡಿಸಲಾಗಿದೆ.
ಕರ್ನಾಟಕ ಮೋಟಾರ್ ವಾಹನಗಳ ತೆರಿಗೆ(ಎರಡನೇ ತಿದ್ದುಪಡಿ) ಮಸೂದೆ, ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ಮಸೂದೆ, ಕರ್ನಾಟಕ ಪ್ರವಾಸೋದ್ಯಮ ರೋಪ್ ವೇಗಳ ಮಸೂದೆ, ಬಿಬಿಎಂಪಿ(ಎರಡನೇ ತಿದ್ದುಪಡಿ) ಮಸೂದೆ, ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ(ಎರಡನೇ ತಿದ್ದುಪಡಿ) ಮಸೂದೆಗಳನ್ನು ಕೂಡ ವಿಧಾನಸಭೆಯಲ್ಲಿ ಮಂಡನೆ ಮಾಡಲಾಗಿದೆ.